ಕಣ್ಣು ಮಂಜಾಗಿದೆ..
ನಿಟ್ಟಿಸಿ ನೋಡಿದಾಗ
ದಟ್ಟವಾಗಿ ಕಂಡಿದ್ದ ಹಸಿರುಗುಡ್ಡದ
ಹೊರಮೈ ನೋಟವೂ ಗೊತ್ತಾಗದ ಹಾಗೆ
ಅವತ್ತು ಮಳೆನಿಂತ ಸಂಜೆ
ನೋಟಕ್ಕೇ ರಂಗೇರಿದ್ದ ಕೆನ್ನೆ ಕೆಂಪು ಕರಗಿ
ನಿನ್ನ ಗುರುತೂ ಹಿಡಿಯದ ಹಾಗೆ
ಬರೆದು ಬರೆದು ರಾಶಿ ಹಾಕಿದ
ಕಾಪಿ ಪುಸ್ತಕದ ಪುಟ್ಟ ಕೊಂಕು ತಿದ್ದಿದ ಕಣ್ಣು
ಪೇಪರಿನ ಹೆಡ್ ಲೈನ್ಸ್ ಓದಲು ತಡಬಡಿಸುವ ಹಾಗೆ
ಮಳೆಹನಿವ ಮಧ್ಯಾಹ್ನ
ಕಿಟಕಿಯಾಚೆಗೆ ಕಂಡ ಹಸಿರ ಮಧ್ಯದ ಹಳದಿ
ಕಂದಿದ ಹಾಗೆ..
ಗೋಡೆ ಕುಸಿದ ಹಾಗೆ
ನೆರಳು ಕವಿದ ಹಾಗೆ
ಪುಟ್ಟದೊಂದು ಹೊಸ್ತಿಲೂ ದೊಡ್ಡ ಸಂಕದ ಹಾಗೆ
ಜಗುಲಿ ಅಂಗಳ ಮನೆಯಾಚೆಗಿನ ಮೈದಾನವೆಲ್ಲ ಒಂದಾದ ಹಾಗೆ
ಸುತ್ತ ಇರುವುದೆಲ್ಲ ಇಲ್ಲದ ಹಾಗೆ
ಎಲ್ಲೂ ಇಲ್ಲದ ಯಾರೋ ಸುಳಿದಾಡಿದ ಹಾಗೆ
ಹೀಗೆ..
ಮಂಜಾಗಿದೆ
ಕಣ್ಣು,ಮನಸ್ಸು,ಬುದ್ಧಿ
ಹೊರಗೆ ಕಂಡಿದ್ದೊಂದು,
ಕಾಣಬಯಸುವುದೊಂದು
ಒಳಗೆ ಪ್ರತಿಫಲಿಸುವುದೇ ಇನ್ನೊಂದು..
ಒಂದು ಸಂತಸವೆಂದರೆ
ಮಂಜುಗಣ್ಣಿಗೆ ಕಂಡೂ ಕಾಣದೆಯೂ
ನೀನಿದ್ದೀಯ ಜತೆಗೆ
ಹೆಜ್ಜೆ ಎಡವದ ಹಾಗೆ
ಕಾಣದ್ದೆಲ್ಲವೂ ಕಾಣಿಸುವ ಹಾಗೆ!
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ
-
“ಅಸ್ಯುತ್ತರಸ್ಯಾಂ ದಿಶಿ ದೇವತಾತ್ಮಾ ಹಿಮಾಲಯೋ ನಾಮ ನಗಾಧಿರಾಜಃ| ಪೂರ್ವಾಪರೌ ತೋಯನಿಧೀ
ವಗಾಹ್ಯ ಸ್ಥಿತಃ ಪೃಥಿವ್ಯಾ ಇವ ಮಾನದಂಡಃ ”
ಕವಿಗುರು ಕಾಳಿದಾಸನು ತನ್ನ ‘ಕುಮಾರಸಂಭವ’ ಕಾವ್ಯ...
4 comments:
thank u.
ಸಿಂಧು...
ತುಂಬಾ ಚೆನ್ನಾಗಿದೆ,
"ನೀನಿದ್ದೀಯ ಜತೆಗೆ
ಹೆಜ್ಜೆ ಎಡವದ ಹಾಗೆ
ಕಾಣದ್ದೆಲ್ಲವೂ ಕಾಣಿಸುವ ಹಾಗೆ!"
ಓದಿದ್ದು ಕಣ್ಣಿಂದ ಮನಸ್ಸಿಗೂ ಬಂದು, ಈ ಸಾಲುಗಳು ಬಾಯಲ್ಲಿ ನಿಂತುಬಿಟ್ಟಿವೆ.
ಶಾಂತಲಾ,
ಆ ಸಾಲುಗಳು ನಿಜ. ಅವನಿದ್ದಾನೆ ಜೊತೆಗೆ ಹೆಜ್ಜೆ ಎಡವದ ಹಾಗೆ, ಕಾಣದ್ದೆಲ್ಲವೂ ಕಾಣಿಸುವ ಹಾಗೆ.
ನಿಂಗೆ ಇಷ್ಟವಾಗಿದ್ದು ನಂಗೆ ಖುಷಿಯಾತು.
ಅಬ್ಬಬ್ಬ :) ಸಖತ್ತಾಗಿದೆ
Post a Comment