ಸುತ್ತ ನಾಕು ಚುಕ್ಕಿ,
ನೆಟ್ಟಗೆಳೆದರೆ ನಕ್ಷತ್ರ,
ಸೊಟ್ಟಗೆಳೆದರೆ ಬಳ್ಳಿರಂಗೋಲೆ,
ನನ್ನದೇ ಚುಕ್ಕಿ, ನನ್ನದೇ ಗೆರೆ. ಇಷ್ಟೆ.
ಮಂಡಲವ ಮೀರಿ
ಪಥ ಹುಡುಕುವ ಮನ
ಮತ್ತೆ ಮತ್ತೆ
ನಾನೇ ಇಟ್ಟ ಚುಕ್ಕಿ
ಎಳೆದ ಗೆರೆಯೊಳಗೆ
ಸುತ್ತಿ ಸುತ್ತಿ
ಕಣ್ಣ ಕೊನೆಯಲ್ಲಿ ಹನಿಯಾಗಿ
ತುಂಬುತ್ತದೆ. ಅಷ್ಟೆ.
ಗೊತ್ತಿಲ್ಲ
ಇಷ್ಟಕ್ಕೂ ನನಗ್ಯಾಕೆ
ರಂಗೋಲಿಯ ಉಸಾಬರಿ
ಅದು ಹೇಗೋ ಏನೋ
ಇದೇ ಬದುಕಿನ ಪರಿ,
ಅರಿವಿರದೆ
ಇಟ್ಟ ಚಿಕ್ಕೆ
ಎಳೆದ ಗೆರೆ
ನನ್ನದೇ ಮಂಡಲದಲ್ಲಿ
ನಾನೇ ಸೆರೆ. ಪಥಭ್ರಷ್ಟೆ.
ಜೋತಯ್ಯನ ಬಿದಿರು ಬುಟ್ಟಿ..................................ತೇಜಸ್ವಿನಿ ಹೆಗಡೆ
-
ಮಾನವೀಯ ಅನುಕಂಪವು ತೇಜಸ್ವಿನಿ ಹೆಗಡೆಯವರ ಸಾಹಿತ್ಯದ ಮೂಲಸ್ರೋತವಾಗಿದೆ. ತೇಜಸ್ವಿನಿಯವರ
ಕಥೆಗಳು ಸಂವೇದನಾಶೀಲ ಲೇಖನಿಯಿಂದ ಬಂದ ಕಥೆಗಳಾಗಿವೆ. ‘ಜೋತಯ್ಯನ ಬಿದಿರು ಬುಟ್ಟಿ’ಯೊಳಗಿರುವ
ಹತ್ತ...