ಕಣ್ಣಿಗೆ ಕಂಡದ್ದೆಲ್ಲವನ್ನೂ
ಮನದ ಭಿತ್ತಿಯೊಳಗೆ ಮೂಡಿಸಲಾಗುವುದಿಲ್ಲ;
ಒಳಗೆ ಮೂಡಿದ್ದೆಲ್ಲವನ್ನೂ
ಹೊರಗೆ ಹಂಚಿಕೊಳ್ಳಲೂ ಆಗುವುದಿಲ್ಲ.
ಕಂಬನಿಯ ಬದುಕಿಗೆ
ಕವಿತೆಯ ಕರವಸ್ತ್ರ ಕೊಟ್ಟವರು
ಮಾತಿನ ಹಾದಿಯುದ್ದಕ್ಕೆ
ಮೌನದ ಹೆಜ್ಜೆ ಇಟ್ಟು ಹೋಗಿದ್ದಾರೆ.
ಇಷ್ಟಕ್ಕೂ ಭಾವವೊಂದು
ನನ್ನದೇ ಮಾತಾಗಿ ದಾಖಲಾಗಲೇಬೇಕೆ!
ಗುಳ್ಳೆ-
ಒಳಿತು,ಚೆಲುವು,ಭಾವ,ಸಹಯಾನ,ಬದುಕು,ಬದಲಾವಣೆ,ನಾನುಇತ್ಯಾದಿ..
- ಎಲ್ಲ ಗುಳ್ಳೆಗಳೂಒಡೆದಿವೆ,
ಈ ದಾರಿ ಕೊನೆಗೊಂಡಿದೆ.
ಎಲ್ಲರ ಪ್ರೀತಿಯ ಸ್ಪಂದನೆಗೆ ತಲೆಬಾಗಿ ನಮಿಸುತ್ತಾ
ನೇಪಥ್ಯ ಸಿಂಧುವಿನೊಳಗಿನ್ನೊಂದು ಬಿಂದುವಾಗಿ..
-ಪ್ರೀತಿಯಿಂದ
ಸಿಂಧು
ಮೂರು ಡಬ್ಬಿಗಳು ಮತ್ತು...
-
ಅಜ್ಜ-ಅಜ್ಜಿಯ ಕಾಲದಿಂದಲೂ ನಮ್ಮ ಮನೆಯಲ್ಲಿ ಮೂರು ಡಬ್ಬಿಗಳು ಸದಾ ಇದ್ದವು: ಔಷಧಿ ಡಬ್ಬಿ,
ರಿಪೇರಿ ಡಬ್ಬಿ ಮತ್ತು ಸೂಜಿ ಡಬ್ಬಿ.
ಆಸ್ಪತ್ರೆ-ಮೆಡಿಕಲ್ ಶಾಪುಗಳು ದೂರವಿರುವ ಹಳ್ಳಿಯ ಮನೆಯಾ...