ಈಗಷ್ಟೆ ನಿಂತ ಮಳೆ,
ಮರಮರದ ಹಸಿರೆಲೆಯ
ತುದಿಮೂಗಲ್ಲಿ ಪುಟ್ಟ ಪುಟ್ಟಹನಿ,
ಮೋಡ ಚೆದುರಿ, ಕೊನೆಯ ಕಿರಣಗಳು
ಕೆಂಪಗೆ ನೀಲಿಯಲ್ಲಿ ಹರಡುತ್ತಾ
ಹಿತವಾದ ಸಂಜೆ,
ದಾರಿ ಇಕ್ಕೆಲದ ಕಳೆಗಿಡಕ್ಕೂ
ಮಳೆಹನಿಯ ಸವಿದು
ಎಂತದೋ ಬಳುಕು ;
ದಾರಿಬದಿಯ ನೀರಹರಿವಿನಲ್ಲಿ
ಚಿಣ್ಣರ ಪುಟ್ಟ ಕಾಲಾಟ;
ತುಂಬಿಬಂದಿದೆ ಮನ
ಮನೆಗೆ ಬಂದವಳು ಕದವ ತೆರೆದೆ
ಬಾಲ್ಕನಿಯಾಚೆಗೆ ದೂರದಲಿ
ಸಾವನದುರ್ಗದ ಮೇರುನೋಟ;
ನೀನಿಲ್ಲ ಜತೆಯಲ್ಲಿ
ಅಕ್ಷಾಂಶವೇ ಬೇರೆ
ಹರಡಿಬಿದ್ದಿದೆ ಗುರುತು ಹಾಕಿಟ್ಟ ಭೂಪಟ
ಗೊತ್ತು ಕೆಲದಿನಗಳ ದೂರ
ಹೇಗೆ ಇಳುಕಲಿ ಮನದ ಭಾರ?
ಕೈ ಮುಗಿದು ಕೂತಿದ್ದೇನೆ
ಬಿಸಿಹಾಲಿನ ಬಟ್ಟಲ ಮುಂದೆ..
ಗೊತ್ತು ನೀನಲ್ಲೆ ಇದ್ದರೂ
ಮನಸು ಇಲ್ಲೆ ಉಳಿದಿದೆ..!
ನೋಟ್ ಬುಕ್ಕಿನ ಕಡೆಯ ಪುಟ.....ಜಯಶ್ರೀ ದೇಶಪಾಂಡೆ
-
ʼನೋಟ್ ಬುಕ್ಕಿನ ಕಡೆಯ ಪುಟʼ ಈ ಹಾಸ್ಯಪಂಚವಿಂಶತಿಯನ್ನು ಬರೆದ ಶ್ರೀಮತಿ ಜಯಶ್ರೀ
ದೇಶಪಾಂಡೆಯವರಿಗೆ ಹಾಗು ಪ್ರಕಟಿಸಿದ ಶ್ರೀ ಅಣಕು ರಾಮನಾಥರಿಗೆ ಅಭಿನಂದನೆಗಳನ್ನು ಹಾಗು
ಧನ್ಯವಾದಗಳನ್ನು ಮ...